Kannada NewsKarnataka NewsLatest

*ಗೋಕರ್ಣ ಬಳಿ ಮೀನುಗಾರರ ದೋಣಿ ಪಲ್ಟಿ*

ಪ್ರಗತಿವಾಹಿನಿ ಸುದ್ದಿ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯರು ಸುರಕ್ಷಿತವಾಗಿ ರಕ್ಷಿಸಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಈ ಘಟನೆ ನಡೆದಿದೆ. ಸುರೇಂದ್ರ ಹರಿಕಂತ್ರ ಅವರಿಗೆ ಸೇರಿದ ‘ಲಕ್ಷ್ಮೀಕೃಪ’ ಎಂಬ ಬೋಟ್  ಬೆಳಗ್ಗೆ ತದಡಿ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿತ್ತು. ಆದರೆ, ಬಂದರಿನಿಂದ ಸ್ವಲ್ಪ ದೂರ ಸಾಗುತ್ತಿದ್ದಂತೆಯೇ ಅಳವೆಯಲ್ಲಿ ತುಂಬಿದ್ದ ಹೂಳಿನಲ್ಲಿ ಬೋಟ್ ಸಿಲುಕಿಕೊಂಡಿದೆ. ಇದೇ ವೇಳೆ ಅಪ್ಪಳಿಸಿದ ಭಾರೀ ಸಮುದ್ರದ ಅಲೆಗಳ ಹೊಡೆತಕ್ಕೆ ಬೋಟ್‌ನ ತಳಭಾಗ ಜಜ್ಜಲ್ಪಟ್ಟು ನೀರು ತುಂಬಿ ಮುಳುಗಿದೆ. 

ಬೋಟ್ ಮುಳುಗುತ್ತಿರುವುದನ್ನು ಗಮನಿಸಿದ ಸಮೀಪದ ಸ್ಥಳೀಯ ಮೀನುಗಾರರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೋಟ್‌ನಲ್ಲಿದ್ದ ನಾಲ್ವರನ್ನೂ ದಡಕ್ಕೆ ಕರೆತಂದು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಈ ಅಪಘಾತದಿಂದಾಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button