Kannada NewsKarnataka NewsNational

*ಬಾಂಬ್ ಬೆದರಿಕೆ ಹಿನ್ನಲೆ: ತುರ್ತು ಭೂಸ್ಪರ್ಶವಾದ ವಿಮಾನ*

ಪ್ರಗತಿವಾಹಿನಿ ಸುದ್ದಿ: ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Home add -Advt

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ 6E5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ಲ್ಯಾಂಡ್ ಆದ ತಕ್ಷಣ ಏರ್ ಲೈನ್ಸ್‍ನ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದಾರೆ. 

ಭದ್ರತಾ ಏಜೆನ್ಸಿ ಮಾರ್ಗಸೂಚಿಯ ಪ್ರಕಾರ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಹಿಂತಿರುಗಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

Back to top button