
ಪ್ರಗತಿವಾಹಿನಿ ಸುದ್ದಿ: 70 ಅಡಿ ಆಳದ ಕಂದಕಕ್ಕೆ ಪ್ರಯಾಣಿಕರ ಬಸ್ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, 23 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ತೆಹ್ರ ಜಿಲ್ಲೆಯ ಕುಂಜಾಪುರಿ ಹಿಂಡೋಲಖಲ್ ಬಳಿ ನಡೆದಿದೆ.
ತಕ್ಷಣವೇ ಕಾರ್ಯಪ್ರವೃತ್ತರಾದ ರಕ್ಷಣಾ ಸಿಬ್ಬಂದಿ, ಗಾಯಾಳುಗಳನ್ನು ಋಷಿಕೇಶ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಭೀಕರ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಜಿಲ್ಲಾಡಳಿತ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳಿಗೆ ಎಲ್ಲಾ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.



