Politics

*ಪಂಚ ಗ್ಯಾರೆಂಟಿ ವಿರುದ್ಧ ಸುಳ್ಳು ಪ್ರಚಾರ: ಶ್ತಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನ ಮಹತ್ವದ ಗ್ಯಾರಂಟಿಗಳ ಬಗ್ಗೆ ಮಾತನಾಡಿದವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ 5 ಗ್ಯಾರೆಂಟಿಗಳ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಆರೋಪದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಇಟ್ಟುಕೊಂಡು ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಲಾಗಿದೆ. ಈ ಬಗ್ಗೆ ಯಾರೆಲ್ಲಾ ಮಾತನಾಡಿದ್ದಾರೆ ಎಂದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಅಲ್ಲದೇ, ನಮ್ಮ ಈ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಲಕ್ಷಾಂತರ ಮಂದಿ ಇದರ ಸದುಪಯೋಗ ಪಡಿಸಿಕೊಂಡಿದ್ದಾರೆ. ಮಹಿಳೆಯರು ಸ್ವಾವಲಂಬಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿರುವುದು ಸರಿಯಲ್ಲ ಎಂದು ಪರಮೇಶ್ವ‌ರ್ ಹೇಳಿದರು.

ಈಗಾಗಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ನವರು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅದರಂತೆ ಪರಿಶೀಲನೆ ನಡೆಸುತ್ತಿದ್ದಾರೆ, ಸದ್ಯದಲ್ಲೇ ಸಂಬಂಧಪಟ್ಟವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್ ವಿಕ್ರಮ್ ಗೌಡ ನನ್ನು ಹೊಡೆದುರುಳಿಸಿದ ಬಗ್ಗೆ ಮಾತನಾಡಿದ್ದು, ಕಳೆದ 20 ವರ್ಷಗಳಿಂದ ನಕ್ಸಲ್ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ ಆದರೆ ನಿನ್ನೆ ಹೆಬ್ರಿಯ ಕಬ್ಬಿನಾಲೆಯಲ್ಲಿ ಇದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದರು.

ಕಳೆದ ವಾರವಷ್ಟೇ ತೀರ್ಥಹಳ್ಳಿಯಲ್ಲಿ ಲತಾ ಹಾಗೂ ರಾಜು ಎಂಬುವವರು ಎಎನ್ ಎಫ್ ಸಿಬ್ಬಂದಿ ಬರುತ್ತಿದ್ದಂತೆ ಪರಾರಿಯಾಗಿದ್ದರು. ಹೀಗೆ ಶೋಧ ಕಾರ್ಯ ನಡೆಸುವಾಗ ಹೆಬ್ರಿಯ ಬಳಿ ನಕ್ಸಲ್ ವಿಕ್ರಮ್ ಗೌಡ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ.

ಕೂಡಲೇ ಎಚ್ಚೆತ್ತ ಎಎನ್ ಎಫ್ ಸಿಬ್ಬಂದಿ ವಿಕ್ರಮ್ ನನ್ನು ಹೊಡೆದುರುಳಿಸಿದ್ದಾರೆ. ಉಳಿದವರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಂತರ ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button