Kannada NewsKarnataka NewsNational

*ಭೀಕರ ಅಪಘಾತದಲ್ಲಿ ಇಬ್ಬರ ಮಕ್ಕಳು ಸೇರಿ ಐವರ ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಕಿಶನ್‌ಗಂಜ್‌ ಜಿಲ್ಲೆಯ ಪೇಟ್‌ಭಾರಿ ಗ್ರಾಮದ ಬಳಿ ನಡೆದಿದೆ.

Related Articles
Home add -Advt

ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7ಕ್ಕೂ ಹೆಚ್ಚು ಜನ ಗಾಯವಾಗಿದೆ ಎನ್ನಲಾಗಿದೆ.‌ ಮೃತಪಟ್ಟವರ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಅಪಘಾತವಾದ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಈ ದುರಂತದಲ್ಲಿ ಕಾರು ಚಾಲಕ ಕೂಡ ಸಾವನ್ನಪ್ಪಿದ್ದಾನೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಅತ್ಯಂತ ದುರಂತ ಘಟನೆ. ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ತಾವು ಸಹ ಭೇಟಿ ನೀಡಿದ್ದು, ಮೃತರ ಗುರುತು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Related Articles

Back to top button