Kannada NewsKarnataka NewsLatest
*ಪಂಚತಾರಾ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಹಲವು ಪ್ರತಿಷ್ಠಿತ ಪಂಚತಾರಾ (ಫೈವ್ ಸ್ಟಾರ್) ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹಲವು ಪ್ರತಿಷ್ಠಿತ ಪಂಚತಾರಾ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ನಿಯಮಗಳ ಉಲ್ಲಂಘನೆ ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸಿದ್ಧ ಖಾಸಗಿ ಹೋಟೆಲ್ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿ ಅವಧಿ ಮೀರಿದ 31 ಲೀಟರ್ ಹಾಲು ಪತ್ತೆಯಾಗಿದೆ.


