Election NewsLatestNationalPolitics

*ಪಂಚ ರಾಜ್ಯಗಳ ಚುನಾವಣಾ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕದ ಜೊತೆಗೆ ಪಂಚ ರಾಜ್ಯಗಳ ಚುನಾವಣೆಗೂ ಮುಹೂರ್ತ ಫಿಕ್ಸ್ ಆಗಿದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕಗಳ ಮುಖ್ಯ ಚುನವಣಾ ಆಯುಕ್ತರು ಪ್ರಕಟಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಿಂದ 29ರವರೆಗೂ ಮತದಾನ ನಡೆಯಲಿದೆ. ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದರು.

Home add -Advt

ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಉಳಿದ ನಾಲ್ಕು ಕಡೆ ಒಂದೇ ಹಂತದಲ್ಲಿ ಮತದಾನವಾಗಲಿದೆ.

ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳಲ್ಲಿಯೂ ಮೇ 4ರಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು. ಅಲ್ಲದೇ ಇಂದಿನಿಂದಲೇ ಎಲ್ಲಾಅ ರಾಜ್ಯಗಳಲ್ಲಿಯೂ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದರು.


Related Articles

Back to top button