Belagavi NewsBelgaum NewsKannada NewsKarnataka NewsNationalPolitics

*7 ದಿನ ರಾಜ್ಯದಲ್ಲಿ ಭಾರಿ ಮಳೆ: 10 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಬಲವಾದ ಗಾಳಿಯೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. 

ಮೇ 28ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು ಜೂನ್ 4 ರಂದು ಮುಂಗಾರು ಕೇರಳಕ್ಕೆ ಹಾಗೂ 5ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.

Related Articles

Back to top button