ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ: ಸಿಎಂಗೆ ನಿರಾಶ್ರಿತ ಕುಟುಂಬಗಳ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2013ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅವರು ಇಂದು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿರುವ ತಾರತಮ್ಯ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ನೇತೃತ್ವದ … Continue reading ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ: ಸಿಎಂಗೆ ನಿರಾಶ್ರಿತ ಕುಟುಂಬಗಳ ಮನವಿ