ಪ್ರಗತಿವಾಹಿನಿ ಸುದ್ದಿ, ಮಂಗಳೂರು:
ಇಲ್ಲಿಯ ಬಜ್ಪೆ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಭಾರಿ ಅನಾಹುತವೊದು ತಪ್ಪಿದ್ದು, 183 ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಭೂಸ್ಪರ್ಶ ಆಗುವ ಸಂದರ್ಭದಲ್ಲಿ ರನ್ ವೇ ಹೊರಗೆ ವಿಮಾನ ಜಾರಿದೆ. ಇದು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ 380 ವಿಮಾನ.
ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ರನ್ ವೇಯಿಂದ ಹೊರ ಬಂದಿದೆ. ಆದರೆ ವಿಮಾನದ ಪೈಲಟ್ ನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ವಿಮಾನ ನಿಲ್ದಾಣದ ಸಿಬ್ಬಂದಿಯು ಎಲ್ಲ 183 ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.
ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ವರ್ಷ ಭಾರಿ ವಿಮಾನ ಅಪಘಾತವಾಗಿತ್ತು.