Kannada NewsKarnataka NewsLatest

*ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್; ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು*

ಪ್ರಗತಿವಾಹಿನಿ ಸುದ್ದಿ; ಉಡುಪಿ; ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ವಿವಾದ ಸೃಷ್ಟಿಸಿದ್ದು, ಈ ನಡುವೆ ಉಡುಪಿ ಕೋರ್ಟ್ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Home add -Advt

ಆರೋಪಿಗಳಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.

ಉಡುಪಿ ನೇತ್ರಜ್ಯೋತಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಮೂವರ ವಿರುದ್ಧ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಮಲ್ಫೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧನ ಭೀತಿಯಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.


Related Articles

Back to top button