Kannada NewsKarnataka News

ಪ್ರವಾಹ ಮುನ್ನೆಚ್ಚರಿಕೆ ಕ್ರಮ; ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ

ಜಿಲ್ಲೆಯಲ್ಲಿ ವ್ಯಾಪಕ ಮಳೆ : ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮತ್ತು ನೆರೆಯ ಮಹಾರಾಷ್ಟ್ರ ರಾಜ್ಯದ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿ ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನದಿ ಸುತ್ತಮುತ್ತನಲ್ಲಿರುವ ಹಾಗೂ ಅಪಾಯ ಅಂಚಿನಲ್ಲಿರುವ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಎಲ್ಲ ಉಪವಿಭಾಗ ಅಧಿಕಾರಿಗಳು ಹಾಗೂ ತಹಶಿಲ್ದಾರರಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಎಲ್ಲಾ ತಾಲೂಕು, ಉಪವಿಭಾಗ ಮಟ್ಟದಲ್ಲಿ 24 ಗಂಟೆಗಳ ಕಲ ಕಾರ್ಯನಿರ್ವಹಿಸಲು ನಿಯಂತ್ರಣ ಕೊಠಡಿಗಳನ್ನು ತೆರೆದು ಅಗತ್ಯವಾದ ಸಿಬ್ಬಂದಿಗಳನ್ನು ನಿಯೊಜಿಸತಕ್ಕದ್ದು, ನದಿ ಹತ್ತಿರ ಬರುವಂತಹ ಗ್ರಾಮಗಳ ಜನರಿಗೆ ಬೇರೆ ಕಡೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು.

ಪೋಲಿಸ್ ಇಲಾಖೆಯವರು, ಅಗ್ನಿಶಾಮಕ ಸಿಬ್ಬಂದಿಗಳು ರಾಜ್ಯ ವಿಪತ್ತು ಸ್ಪಂದನಾ ಪಡೆ, ಜಿಲ್ಲಾ ಗೃಹರಕ್ಷಕ ದಳದ ಬೆಳಗಾವಿ, ಪಂಚಾಯತ್ ರಾಜ್ಯ ಇಂಜನಿಯರಿಂಗ್ ಹಾಗೂ ಲೋಕೊಪಯೋಗಿ ಇಲಾಖೆಯ ಅಭಿಯಂತರರು ಪ್ರವಾಹದ ಸಂದರ್ಭದಲ್ಲಿ ಜನರ ರಕ್ಷಣೆಗೆ ಬೇಕಾಗುವ ಅಗತ್ಯ ಬೋಟ್‌ಗಳು ಸೇರಿದಂತೆ ಇನ್ನಿತರ ರಕ್ಷಣಾ ಸಾಮಗ್ರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಯಾವುದೇ ಸಮಯದಲ್ಲಿ ಉಪಯೋಗಿಸುವ ಸ್ಥಿತಿಯಲ್ಲಿ ಸಿದ್ಧವಾಗಿಟ್ಟಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಹೆಸ್ಕಾಂ ಇಲಾಖೆಯವರು ನದಿ ಪಕ್ಕದಲ್ಲಿ ಬರುವ ವಿದ್ಯುತ್ ಕಂಬಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಅಥವಾ ಸುರಕ್ಷತೆ ದೃಷ್ಟಿಯಿಂದ ಬೇಕಾಗುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಅದೇ ರೀತಿಯಾಗಿ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಗತ್ಯವಾದ ನುರಿತ ವೈದ್ಯರು, ಸಿಬ್ಬಂದಿ ಹಾಗೂ ಔಷಧಿಗಳೊಂದಿಗೆ ಪ್ರವಾಹ ಪೀಡಿತ ಸ್ಥಳಗಳಲ್ಲಿ ಸನ್ನದ್ದರಾಗಿರಬೇಕು.

ಸಂಬಂಧಿಸಿದ ಉಪವಿಭಾಗ ಅಧಿಕಾರಿಗಳು ತಮ್ಮ ಉಪವಿಭಾಗ ವ್ಯಾಪ್ತಿಯಲ್ಲಿ, ಅತೀವೃಷ್ಠಿ, ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯವಾದ ತಿಳವಳಿಕೆ ನೀಡಬೇಕು.

ಯಾವುದೇ ಇಲಾಖೆಯು ಜಿಲ್ಲಾ, ಉಪವಿಭಾಗ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗದೇ ಜನ ಮತ್ತು ಜಾನುವಾರಗಳಿಗೆ ಜೀವಹಾನಿ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಸಂಭವಿಸದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಸ್ಥಗಳಲ್ಲಿ ದುರ್ಘಟನೆ ಸಂಭವಿಸಿದ ತಕ್ಷಣ ಸಂಬಂಧಿಸಿದ ತಹಶಿಲ್ದಾರರಿಗೆ ತಿಳಿಸಬೇಕು.

ಸದರಿ ವಿಷಯವನ್ನು ತಹಶೀಲ್ದಾರರು ಉಪವಿಭಾಗಾಧಿಕಾರಿಗಳ ಮೂಲಕ ಕಚೇರಿಗಯ ಇ-ಮೇಲ್ ಮೂಲಕ ವರದಿಯನ್ನು ಸಲ್ಲಿಸಬೇಕು.
ಒಂದು ವೇಳೆ ಅಧಿಕಾರಿಗಳು ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ÷್ಯ ಧೋರಣೆಯನ್ನು ಅನುಸರಿಸಿದಲ್ಲಿ ಅಂತಹವರ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರವಾಹ ಮುನ್ನೆಚ್ಚರಿಕೆ ಕ್ರಮ; ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ

ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ದಿಢೀರ್ ನೀರು ಬಿಟ್ಟರೆ ಕೃಷ್ಣಾ ಸೇರಿದಂತೆ ವಿವಿಧ ನದಿ ಪಾತ್ರದಲ್ಲಿರುವ ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳು ಪ್ರವಾಹದಿಂದ ತೀವ್ರವಾಗಿ ಬಾಧಿತಗೊಳ್ಳಲಿವೆ. ಅದೇ ರೀತಿ 39 ಗ್ರಾಮಗಳು ಪ್ರವಾಹದಿಂದ ಭಾಗಶಃ ಬಾಧಿತಗೊಳ್ಳುವ ಸಾಧ್ಯತೆಯಿದೆ ಎಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ತಿಳಿಸಿದ್ದಾರೆ.

ಚಿಕ್ಕೊಡಿ ಉಪ ವಿಭಾಗದ ಚಿಕ್ಕೋಡಿ, ರಾಯಬಾಗ ಹಾಗೂ ಅಥಣಿ ತಾಲ್ಲೂಕಿನಲ್ಲಿ ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಪಂಚಗಂಗಾ ನದಿ ತೀರದಲ್ಲಿರುವ ಒಟ್ಟು 37 ಗ್ರಾಮಗಳು ಪ್ರವಾಹದಿಂದ ತೀವ್ರವಾಗಿ ಬಾಧಿತಗೊಳ್ಳಲಿದ್ದು, ಅದೇ ರೀತಿ ಒಟ್ಟಾರೆ 39 ಗ್ರಾಮಗಳು ಭಾಗಶಃ ಬಾಧಿತಗೊಳ್ಳಲಿವೆ.

ತುರ್ತು ಸಂದರ್ಭದಲ್ಲಿ ನದಿ ತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಹಾಗೂ ಪರಿಹಾರ (ಗಂಜಿ) ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಮುಂಚಿತವಾಗಿಯೇ ಗುರುತಿಸಲಾಗಿದೆ.

ನದಿ ತೀರದ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮವಾಗಿ ಸಾಧ್ಯವಾದಷ್ಟು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಮುಳುಗಡೆಗೊಂಡಿರುವ ಸೇತುವೆಗಳನ್ನು ದಾಟುವ ಸಾಹಸಕ್ಕೆ ಮುಂದಾಗಬಾರದು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ಮನವಿ ಮಾಡಿಕೊಂಡಿದ್ದಾರೆ.

ತೀವ್ರ ಬಾಧಿತಗೊಳ್ಳುವ ಗ್ರಾಮಗಳು:

ಚಿಕ್ಕೋಡಿ ತಾಲ್ಲೂಕು- ಕಲ್ಲೋಳ, ಯಡೂರ, ಇಂಗಳಿ, ಚಂದೂರ, ಮಾಂಜರಿ, ಬಾರವಾಡ ಹಾಗೂ ಹುನ್ನರಗಿ. ರಾಯಬಾಗ ತಾಲ್ಲೂಕು-ಹಳೇ ದಿಗ್ಗೆವಾಡಿ, ಗುಂಡವಾಡ, ಶಿರಗೂರ, ಖೇಮಲಾಪುರ, ಸಿದ್ದಾಪುರ ಅಥಣಿ ತಾಲ್ಲೂಕು-ಮೊಳವಾಡ, ಕುಸನಾಳ, ಕೃಷ್ಣಾ ಕಿತ್ತೂರ, ಬಣಜವಾಡ, ತೀರ್ಥ, ನದಿಇಂಗಳಗಾಂವ, ದರೂರ, ಕವಟಕೊಪ್ಪ, ಶೇಗುಣಶಿ, ಹುಲಬಾಳಿ, ಅವರಖೋಡ, ನಾಗನೂರ ಪಿ.ಕೆ., ಸತ್ತಿ, ಮಹಿಷವಾಡಗಿ, ಜನವಾಡ, ಸವದಿ ದರ್ಗಾ, ಶಿರಹಟ್ಟಿ, ಕಾತ್ರಾಳ, ಝುಂಜರವಾಡ, ನಂದೇಶ್ವರ, ಸಪ್ತಸಾಗರ, ಮಂಗಾವತಿ, ಜುಗೂಳ, ಶಹಾಪುರ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button