ಪ್ರಗತಿವಾಹಿನಿ ಸುದ್ದಿ; ಬೀಜಿಂಗ್: ಚೀನಾದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿಯಿಂದಾಗಿ ಪ್ರಮುಖ ನಗರಗಳು ನಲುಗಿ ಹೋಗಿವೆ. ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನ ಕಣ್ಮರೆಯಾಗಿದ್ದಾರೆ.
ಭಾರಿ ಮಳೆ, ಪ್ರವಾಹದಿಂದಾಗಿ ಚೀನಾದ ಹಲವು ನಗರಗಳು ಜಲಾವೃತಗೊಂಡಿದ್ದು, ಕಟ್ಟಡಗಳು ಧರಾಶಾಹಿಯಾಗಿವೆ. 12 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದು, ರಕ್ಷಣಾ ಕಾರ್ಯಕ್ಕಾಗಿ ಚೀನಾ ಸರ್ಕಾರ 17,000 ಅಗ್ನಿಶಾಮಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ.
ಇನ್ನು ವಿಶ್ವದ ಅತಿದೊಡ್ಡ ಐಫೋನ್ ತಯಾರಿಕಾ ಘಟಕವಿರುವ ಚೀನಾದ ಹೆನಾನ್ ಝೆಂಗ್ ಝು ನಗರದಲ್ಲಿ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, 2 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. 24 ಗಂಟೆಯಲ್ಲಿ 200 ಮಿ.ಮೀ ಮಳೆಯಾಗುತ್ತಿದೆ. ಬಸ್, ರೈಲು, ವಿಮಾನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ.
ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾದ ಮೊದಲ ಆರ್.ಜೆ ಅನನ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ