*ಮಹಾರಾಷ್ಟ್ರದಲ್ಲಿ ಸುರಿದ ಮಳೆಗೆ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ವರುಣ ಆರ್ಭಟಿಸುತ್ತಿದ್ದಾನೆ. ಈ ಹಿನ್ನಲೆ ಕೃಷ್ಣ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಚಿಕ್ಕೋಡಿಯ ಉಪವಿಭಾಗದ ಕೃಷ್ಣ ದೂದ ಗಂಗಾ, ವೇದಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.
ಇನ್ನು ಮಳೆಯ ಅಬ್ಬರ ಕಡಿಮೆಯಾಗದ ಹಿನ್ನಲೆ ನೀರಿನ ಹೊರಹರಿವು ಹೆಚ್ಚಳವಾಗಲಿದ್ದು ಕೃಷ್ಣ ನದಿಯ ಮೂಲಕ ರಾಜ್ಯಕ್ಕೆ ಭಾರೀ ನೀರು ಹರಿದು ಬರುವ ಸಾಧ್ಯತೆ ಇದೆ. ಈಗಾಗಲೇ ಕೃಷ್ಣಾ ನದಿಗೆ 99 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದು ಜಲಾಶಯಗಳ ನೀರು ಸೇರಿದರೇ 1 ಲಕ್ಷ 75 ಸಾವಿರ ಕ್ಯೂಸೆಕ್ ದಾಟುವ ಸಾಧ್ಯತೆ ಇದೆ.
ಒಂದು ವೇಳೆ 1 ಲಕ್ಷ 75 ಸಾವಿರ ಕ್ಯೂಸೆಕ್ ನೀರು ಕೃಷ್ಣ ನದಿಗೆ ಸೇರಿದರೇ ನದಿಯ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.