ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ, ಪ್ರವಾಹದಿಂದಾಗಿ ಇದುವರೆಗೂ 13 ಜನರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಹಲವು ಪ್ರದೇಶಗಳು ಇನ್ನೂ ಜಲಾವೃತವಾಗಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಳೆ ಹಾನಿ, ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮಳೆಯಿಂದಾಗಿ ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಲಾಗುವುದು. ತಕ್ಷಣಕ್ಕೆ 10 ಸಾವಿರ ರೂಪಾಯಿ ವಿತರಿಸುವಂತೆ ಸೂಚಿಸಲಾಗಿದೆ. ಭಾಗಶ: ಮನೆ ಕಳೆದುಕೊಂಡುವರಿಗೆ 3 ಲಕ್ಷ ಪರಿಹಾರ ನೀಡಲಾಗುವುದು ಎಂದರು.
ಮಳೆಯಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದ್ದು, ರಸ್ತೆಗಳು, ಸೇತುವೆಗಳು ಸಂಪೂರ್ಣ ಹಾಳಾಗಿವೆ. ರಾಜ್ಯ ಸರ್ಕಾರ 500 ಕೋಟಿ ಬಿಡುಗಡೆ ಮಾಡಿದ್ದು, 150 ಕೋಟಿ ಎನ್ ಡಿ ಆರ್ ಎಫ್ ಅನುದಾನದಲ್ಲಿ ಬಳಕೆ ಮಾಡಲಾಗುತ್ತದೆ. ಬೆಳೆನಾಶದ ಬಗ್ಗೆ 15 ದಿನಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಸಮೀಕ್ಷೆಗೆ ಕೇಂದ್ರದಿಂದ ತಂಡ ಕಳಿಸುವಂತೆ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ