ಪ್ರವಾಹ: ಬೆಳಗಾವಿಗೆ ಇಬ್ಬರು ಅಪರ ಜಿಲ್ಲಾಧಿಕಾರಿಗಳ ನೇಮಕ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿರುವ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಇಬ್ಬರು ಹೆಚ್ಚುವರಿ ಅಪರ ಜಿಲ್ಲಾಧಿಕಾರಿಗಳನ್ನು ನೇಮಿಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳ ಮೇಲುಸ್ತುವಾರಿಗಾಗಿಯೇ ಈ ಇಬ್ಬರನ್ನು ನೇಮಿಸಲಾಗಿದೆ. ಒಬ್ಬರು ಪೂರ್ಣ ಬೆಳಗಾವಿ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳಬೇಕೆಂದು, ಮತ್ತೊಬ್ಬರು ಚಿಕ್ಕೋಡಿ ತಾಲೂಕಿನ ಪುನರ್ವಸತಿ ನೋಡಿಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ.
ಸ್ಥಳ ನಿರೀಕ್ಷಣೆಯಲ್ಲಿದ್ದ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಬೆಲಗಾವಿ ಜಿಲ್ಲೆಯ ಹೆಚ್ಚುವರಿ ಅಪರ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಬಾಗಲಕೋಟೆ ಮಲಪ್ರಭಾ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ ಕುಮಾರ ಚಿಕ್ಕೋಡಿ ತಾಲೂಕಿಗೆ ಅಪರ ಜಿಲ್ಲಾಧಿಕಾರಿಯಾಗಲಿದ್ದಾರೆ.
ಈ ಹುದ್ದೆಯನ್ನು ಕೇವಲ ತಾತ್ಕಾಲಿಕವಾಗಿ ಅಂದರೆ 6 ತಿಂಗಳ ಅವಧಿಗಾಗಿ ಸೃಜಿಸಲಾಗಿದೆ. ಇಬ್ಬರು ಅಧಿಕಾರಿಗಳೂ ವಿಳಂಬ ಮಾಡದೆ ಕೂಡಲೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಮಧ್ಯೆ ಬೆಳಗಾವಿ ಅಪ ಜಿಲ್ಲಾಧಿಕಾರಿ ಎಚ್.ಬಿ.ಬೂದೆಪ್ಪ ಅವರನ್ನು ಇಲ್ಲಿಂದ ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಯಾರನ್ನೂ ನೇಮಕ ಮಾಡಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ