Latest

ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ 5 ವರ್ಷ ಜೈಲುಶಿಕ್ಷೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ 5 ವರ್ಷ ಜೈಲುಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ದೋಷಿ ಎಂದು ಕಳೆದವಾರ ತೀರ್ಪು ನೀಡಿದ್ದ ನ್ಯಾಯಾಲಯ ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, 5 ವರ್ಷ ಜೈಲುಶಿಕ್ಷೆ ಹಾಗೂ 60 ಸಾವಿರ ರೂಪಾಯಿ ದಂಡ ವಿಧಿಸಿದೆ.

ಮೇವು ಹಗರಣದ ಐದನೇ ಪ್ರಕರಣವಾದ ಜಾರ್ಖಂಡ್ ನ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂಪಾಯಿ ಅಕ್ರಮವಾಗಿ ವಿತ್ ಡ್ರಾ ಮಾಡಿದ ಪ್ರಕರಣ ಇದಾಗಿದೆ. ಲಾಲು ಪ್ರಸಾದ್ ಯಾದವ್, ಬಿಹಾರ ಮುಖ್ಯಮಂತ್ರಿಯಾಗಿದ್ದಾಗ ಜಾನುವಾರುಗಳಿಗೆ ಮೇವು ಮತ್ತು ಇತರ ಅಗತ್ಯಗಳಿಗಾಗಿ ವಿವಿಧ ಸರ್ಕಾರಿ ಖಜಾನೆಗಳಿಂದ 950 ಕೋಟಿ ರೂಪಾಯಿಗಳ ಅಕ್ರಮವೆಸಗಿದ್ದಾರೆ ಎಂಬ ಪ್ರಕರಣವಾಗಿದೆ. ಜಾರ್ಖಂಡ್‌ನ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಈ ಹಿಂದೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಇದೀಗ ಮತ್ತೆ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಡೊರಾಂಡಾ ಖಜಾನೆ ಪ್ರಕರಣದ 99 ಆರೋಪಿಗಳ ಪೈಕಿ 24 ಮಂದಿಯನ್ನು ಖುಲಾಸೆಗೊಳಿಸಲಾಗಿದ್ದು, 46 ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ.
ನಾಚಿಕೆ ಆಗ್ತಿದೆ; ಸಿಎಂ ಬೊಮ್ಮಾಯಿಗೆ ಹಿಗ್ಗಾ ಮುಗ್ಗಾ ಝಾಡಿಸಿದ ಪ್ರತಾಪ ಸಿಂಹ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button