ಪ್ರಗತಿವಾಹಿನಿ ಸುದ್ದಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ (72) ವಿಧಿವಶರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಬಿಹಾರ ಮೂಲದವರಾದ ಶಾರದ ಸಿನ್ಹಾ ಅವರು, ತಮ್ಮ ಸುಮಧುರ ಕಂಠದಿಂದ 40 ವರ್ಷಕ್ಕೂ ಹೆಚ್ಚು ಕಲಾ ಮೈಥಿಲಿ ಮತ್ತು ಭೋಜ್‌ಪುರಿ ಸಂಗೀತಕ್ಕೆ ವಿಶಿಷ್ಟವಾದ ಕೊಡುಗೆ ನೀಡಿದ್ದಾರೆ. ಹಿಂದಿ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಅನೇಕ ಜನಪ್ರಿಯ ಹಾಡುಗಳನ್ನು ಹಾದಿ ಸಂಗೀತ ಪ್ರಿಯರ ಮನಗೆದ್ದಿದ್ದಾರೆ.
ಬಾಲ್ಯದಿಂದಲೂ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರ ಅವರು ವಿಶಿಷ್ಟ ಕಂಠದಿಂದ ಎಲ್ಲೆಡೆ ಮನೆಮಾತಾಗಿದ್ದರು. ಅವರ ಛತ್ ಪೂಜಾ ಹಾಡುಗಳು ಬಹಳ ಫೇಮಸ್ ಆಗಿದ್ದವು. ಶಾರದಾ ಅವರ ಸಾಧನೆ ಗುರುತಿಸಿದ ಸರ್ಕಾರ ‘ಪದ್ಮಶ್ರೀ’ ಮತ್ತು ‘ಪದ್ಮಭೂಷಣ’ ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ