Kannada NewsKarnataka NewsLatest
ಲಸಿಕೆ ತೆಗೆದುಕೊಳ್ಳುವ ಜೊತೆಗೆ ಆಹಾರ ಮತ್ತು ಜೀವನ ಪದ್ಧತಿ ಬದಲಾವಣೆಯೂ ಅಗತ್ಯ – ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಹೊಡೆದೊಡಿಸಲು ಲಸಿಕೆ ಹಾಕಿಸಿಕೊಳ್ಳುವ ಜೊತೆಗೆ ಮುಂದಿನ ದಿನಗಳಲ್ಲಿ ನಾವು ನಮ್ಮ ಆಹಾರ ಮತ್ತು ಜೀವನ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ನಿರಂತರವಾಗಿ ರೋಗಗಳ ವಿರುದ್ಧ ಹೋರಾಡುವಂತೆ ನಮ್ಮ ದೇಹವನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕರೆ ನೀಡಿದ್ದಾರೆ.
ಮಣ್ಣೂರು ಗ್ರಾಮದಲ್ಲಿ ಕೋವಿಡ್ ಲಸಿಕೆಗಳ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ಕೋವಿಡ್ ಲಸಿಕೆ ಇಂದು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಸಧ್ಯದ ಪರಿಸ್ಥಿತಿಯಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಬೇರೆ ದಾರಿ ಇಲ್ಲ. ಹಾಗಾಗಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಇದರ ಜೊತೆಗೆ ಮುಂದಿನ ದಿನಗಳಲ್ಲಿ ನಾವು ತಜ್ಞರ ಸಲಹೆ ಪಡೆದುಕೊಂಡು ನಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಕೊಳ್ಳಬೇಕು. ಆಹಾರ ಪದ್ಧತಿಯಲ್ಲೂ ಸುಧಾರಣೆ ಮಾಡಿಕೊಳ್ಳಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ಮೃಣಾಲ ಹೆಬ್ಬಾಳಕರ್, ಪಕ್ಷದ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ