ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಲೇ ಹೋಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಮನೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸಲಹೆ ನೀಡುತ್ತಿದ್ದಾರೆ.
ಮನೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುವುದಾದರೆ ಕೊರೋನಾ ಪಾಸಿಟಿವ್ ಬಂದವರ ಆಹಾರ ಹೇಗಿರಬೇಕು?
ಬೆಳಗಾವಿಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಕೊರೋನಾ ಕೇರ್ ಸ್ಪೆಷಲಿಸ್ಟ್, ಕೆ.ಎಲ್.ಇ ಆಸ್ಪತ್ರೆಯ ವೈದ್ಯ ಡಾ.ಎಂ.ಬಿ.ಪ್ರಭು ಪ್ರಗತಿವಾಹಿನಿ ಓದುಗರಿಗಾಗಿ ಡಯೆಟ್ ಚಾರ್ಟ್ ನೀಡಿದ್ದಾರೆ. ಸ್ಥಳೀಯವಾಗಿ ಸಿಗುವ ಆಹಾರಗಳ ಮೇಲೆ ಕೆಲವು ಬದಲಾವಣೆಗಳನ್ನು ಸಹ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಇದು ರೋಗಬಂದು ಮನೆಯಲ್ಲೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿರುವವರಿಗೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕೆಲವು ದಿನ ಹೋಮ್ ಐಸೋಲೇಟ್ ಆದವರಿಗೂ ಅನ್ವಯವಾಗಲಿದೆ.
ಮತ್ತೆ ಬೆಳಗಾವಿಯಲ್ಲಿ ಮುನ್ನೂರರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ