
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಮಾಜಿ ಸಚಿವ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಮನೆವಾಡಿಯಲ್ಲಿ 1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದರು.

ಜನರು ಆದಷ್ಟು ಮನೆಯಿಂದ ಹೊರಗೆ ಬಾರದೆ ಎಚ್ಚರದಿಂದಿರಬೇಕು. ಹೊರಗೆ ಬರಬೇಕಾದ ಅನಿವಾರ್ಯತೆ ಬಂದರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿದ್ದರು.