Karnataka News

*ವಿಷಾಹಾರ ಸೇವಿಸಿ ಅನಾಥಾಶ್ರಮದ ವಿದ್ಯಾರ್ಥಿ ಸಾವು ಕೇಸ್: ಮೂವರು ಅರೆಸ್ಟ್: ಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದು:ಖ ವ್ಯಕ್ತಪಡಿಸಿದ್ದಾರೆ.

ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಮನವಿ ಮಾಡಿದ್ದಾರೆ.

Related Articles

Back to top button