Belagavi NewsBelgaum NewsKannada NewsKarnataka NewsLatest

*ಹಿರೇಕೋಡಿ: ಮದುವೆ ಸಮಾರಂಭದ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಮದುವೆ ಸಮಾರಂಭದ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

ಜಾಕಿರ್ ಪಟೇಲ್ ಎಂಬುವವರ ಮಗಳ ಮದುವೆ ನಿನ್ನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಹಿರೆಕೋಡಿ ಗ್ರಾಮದ ಹೊರವಲಯದಲ್ಲಿ ಭರ್ಜರಿ ಊಟ ಹಾಕಿಸಲಾಗಿತ್ತು. ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಊಟ ಮಾಡಿ ಮನೆಗೆ ವಾಪಸ್ ಆಗಿದ್ದ 100ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Home add -Advt

ತೀವ್ರವಾಗಿ ಅಸ್ವಸ್ಥರಾದ 52 ಜನರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಆರೋಗ್ಯಾಧಿಕಾರಿಗಳು ಹಿರೇಕೋಡಿ ಸರ್ಕಾರಿ ಶಾಲೆಯಲ್ಲಿ ಬೀಡು ಬಿಟ್ಟು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

ಆಸ್ಪತ್ರೆಗೆ ಡಿವೈ ಎಸ್ ಪಿ ಗೌಡರ್ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ, ಅಲ್ಲದೇ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜಾಕಿರ್ ಪಟೇಲ್ ಸಂಬಂಧಿಕರೂ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button