Belagavi NewsBusinessEducationKannada NewsKarnataka News

*ಹಿರೇಕೋಡಿ ಮೊರಾರ್ಜಿ ಶಾಲೆಯಲ್ಲಿ ಮತ್ತೆ ಫುಡ್ ಪಾಯಿಸನ್: ಆಸ್ಪತ್ರೆ ಸೇರಿದ ಮಕ್ಕಳು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ  ಹಿರೇಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಎರಡನೇ ಬಾರಿ ಫುಡ್ ಪಾಯಿಸನ್‌ ಆಗಿದ್ದು, ಮಕ್ಕಳು ಆಸ್ಪತ್ರೆಗೆ ಸೇರಿದ್ದಾರೆ.

ಫುಡ್ ಪಾಯಿಸನ್‌ನಿಂದಾಗಿ 10 ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲವೇ ದಿನಗಳ ಹಿಂದೆ ಇದೇ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್ ಆಗಿ 120 ಮಕ್ಕಳು ಅಸ್ವಸ್ಥಗೊಂಡಿದ್ದರು. ಬೆಳಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥರಾದವರನ್ನು ತಕ್ಷಣವೇ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಈಗ ಘಟನೆ ಮತ್ತೆ ಮರುಕಳಿಸಿದ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರು ಆತಂಕಗೊಂಡಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Home add -Advt

Related Articles

Back to top button