Latest

ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿ; ಉತ್ತರ ಕನ್ನಡ: ಭಾರತದ ಅತಿ ದೊಡ್ಡ ಯುದ್ಧ ವಿಮಾನ ನೌಕೆ ಎಂದು ಖ್ಯಾತಿ ಪಡೆದಿರುವ ಐಎನ್ ಎಸ್ ವಿಕ್ರಮಾಧ್ಯತದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯಲ್ಲಿರುವ ವಿಕ್ರಮಾದಿತ್ಯ ನೌಕೆಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ನೌಕೆಯ ನಾವಿಕರು ಇದನ್ನು ಗಮನಿಸಿ ತಕ್ಷಣ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

Home add -Advt

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ನೌಕೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ದೊಡ್ಡಮಟ್ಟದ ಹಾನಿಯಾಗಿಲ್ಲ ಆದರೆ ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

 

Related Articles

Back to top button