Latest

ಶಾಲಾ ಪಠ್ಯ ವಿವಾದ ಬೆನ್ನಲ್ಲೇ ಪಿಯು ಪಠ್ಯ ಪರಿಷ್ಕರಣೆಗೆ ಚಾಲನೆ ನೀಡಿದ ಶಿಕ್ಷಣ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಪಠ್ಯದಲ್ಲಿ ಹೆಡ್ಗೆವಾರ್ ಸೇರ್ಪಡೆ ವಿಚಾರ ಈಗಾಗಲೇ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ದ್ವಿತೀಯ ಪಿಯು ಭಾರತದ ಇತುಹಾಸ ಪಠ್ಯ ಪುಸ್ತಕ ಪರಿಷ್ಕರಣೆಗೆ ಚಾಲನೆ ನಿದಿರುವ ಶಿಕ್ಷಣ ಇಲಾಖೆ, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಲು ಸೂಚಿಸಿದೆ.

ದ್ವಿತೀಯ ಪಿಯುಸಿಯ ಭಾರತದ ಇತಿಹಾಸ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಿಸಲು ತಿಳಿಸಲಾಗಿದೆ. ಈ ಪಠ್ಯದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯಗಳಿರುವ ಬಗ್ಗೆ ದೂರು ಬಂದಿದ್ದು, ಸಮುದಾಯಗಳ ಭಾವನೆಗೆ ಧಕ್ಕೆಯಾಗುವಂತಹ ವಿಷಯ ತೆಗೆಯುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಪಿಯು ಬೋರ್ಡ್ ನಿರ್ದೇಶಕರು ದ್ವಿತೀಯ ಪಿಯು ಪಠ್ಯ ಪುಸ್ತಕ ಪರಿಷ್ಕರಣೆಗೆ ಸೂಚಿಸಿದ್ದು, ಇದೀಗ ಚಾಲನೆ ದೊರೆತಿದೆ.

ಬಿಜೆಪಿಗೆ ಬಿಸಿ ತುಪ್ಪವಾದ ವಿಜಯೇಂದ್ರ MLC ಸೀಟ್

Home add -Advt

Related Articles

Back to top button