Kannada NewsKarnataka NewsLatestPolitics

*ವಿದೇಶಾಂಗ ಸಚಿವ ಜೈಶಂಕರ್ ಫೆ.28ಕ್ಕೆ ಹುಬ್ಬಳ್ಳಿಗೆ ಆಗಮನ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಫೆ.28ರಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅಂದು ಬಿಡುಗಡೆಗೊಳಿಸಲಿದ್ದಾರೆ.

Home add -Advt

ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಫೆ.28ರಂದು ಸಂಜೆ 4.30ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಸಂಸದ ಪ್ರಹ್ಲಾದ ಜೋಶಿ ಅವರ 16 ವರ್ಷದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಸಂಪೂರ್ಣ ಮಾಹಿತಿ ಒಳಗೊಂಡ ಪುಸ್ತಕ ಇದಾಗಿದೆ.

ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕಾಗಿ ಕೈಗೊಂಡ ಚಟುವಟಿಕೆಗಳನ್ನು ಈ ಪುಸ್ತಕ ವಿಸ್ತಾರವಾಗಿ ಒಳಗೊಂಡಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

Related Articles

Back to top button