Karnataka NewsPolitics

*ಅರಣ್ಯ ಸಚಿವ ಈಶ್ವರ ಖಂಡ್ರೆ ಅತಿಕ್ರಮಣ ಮಾಡಿದ್ದಾರೆ: ಹೆಚ್‌ಡಿಕೆ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹೆಚ್‌ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಚಿವ ಖಂಡ್ರೆ ಅವರಿಗೆ ಮಾಹಿತಿ ಮತ್ತು ಜ್ಞಾನದ ಕೊರತೆ ಇದೆ. ಅವರು ಭೇಟಿ ನೀಡಿರುವ ಜಾಗವು 2002ರಲ್ಲಿಯೇ ಕೆನರಾ ಬ್ಯಾಂಕಿಗೆ ನೀಡಲಾಗಿದೆ. ಸಚಿವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ನಾನು ನಿಮ್ಮಮುಂದೆ ಮಾತನಾಡುತ್ತೇನೆ ಎಂದರು.

Home add -Advt

ಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಅನೇಕ ಕಡೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅದನ್ನೆಲ್ಲ ತೆರವು ಮಾಡುವುದು ಬಿಟ್ಟು ಅರಣ್ಯ ಸಚಿವರು ಹೆಚ್‌ಎಂಟಿ ಮೇಲೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ಕೋಲಾರದ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕ‌ರ್ ಒಬ್ಬರು ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ತೆರವು ಮಾಡಿಸುವ ಧೈರ್ಯವನ್ನು ಅರಣ್ಯ ಸಚಿವರು ತೋರಿಸಲಿ. ಒತ್ತುವರಿ ತೆರವು ಮಾಡಿಸುವಂತೆ ನ್ಯಾಯಾಲಯ ಆದೇಶ ಕೊಟ್ಟಿವೆ. ಅರಣ್ಯ ಇಲಾಖೆ, ಕೋಲಾರ ಜಿಲ್ಲಾಧಿಕಾರಿಗೆ ನೋಟಿಸ್ ಕೊಟ್ಟಿದೆ. ಆದರೂ ಮಾಜಿ ಸ್ಪೀಕ‌ರ್ ಒತ್ತುವರಿ ಜಾಗವನ್ನು ಯಾಕೆ ತೆರವು ಮಾಡುತ್ತಿಲ್ಲ? ಹೇಳಿ ಈಶ್ವರ ಖಂಡ್ರೆ ಅವರೇ ಎಂದು ಪ್ರಶ್ನಿಸಿದರು.

ಶ್ರೀನಿವಾಸಪುರದಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. 61 ಎಕರೆಯನ್ನು ಸರ್ವೆ ಮಾಡಿ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನ್ಯಾಯಾಲಯದ ಆದೇಶ ಆಗಿದೆ. ಆ ಒತ್ತುವರಿ ಭೂಮಿ ವಿಷಯದಲ್ಲಿ ಅರಣ್ಯ ಸಚಿವರು ಅಧಿಕಾರಿಗಳಿಗೆ ಏನು ಸೂಚನೆ ಕೊಟ್ಟಿದ್ದಾರೆ ಅಂತ ಗೊತ್ತು. ಆ ವಿಚಾರದಲ್ಲಿ ಈಶ್ವರ್ ಖಂಡ್ರೆ ಏನ್ ಮಾಡ್ತಿದ್ದೀಯಪ್ಪ? ಬಡವರಿಗೆ ಒಂದು ನ್ಯಾಯ, ಕಾಂಗ್ರೆಸ್‌ನವರಿಗೆ ಒಂದು ನ್ಯಾಯವಾ? ಎಂದು ಖಾರವಾಗಿ ಪ್ರಶ್ನಿಸಿದರು.

Related Articles

Back to top button