Latest

ದಾಳಿ ನಡೆಸಿದ ಅರಣ್ಯಾಧಿಕಾರಿಗಳನ್ನು ಮನೆಯಲ್ಲಿಯೇ ಕೂಡಿ ಹಾಕಿದ ಗ್ರಾಮಸ್ಥರು

ಪ್ರಗತಿವಾಹಿನಿ ಸುದ್ದಿ; ಮುಂಡಗೋಡ: ಮನೆಯ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ಕೂಡಿ ಹಾಕಿದ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋದ ತಾಲೂಕಿನ ಕೆಂದಲಗೇರಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.

ಮನೆಯಲ್ಲಿ ಜಿಂಕೆ ಮಾಂಸ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ಮನೆಯಲ್ಲಿ ಯಾವುದೇ ಮಾಂಸ ಪತ್ತೆಯಾಗಿಲ್ಲ. ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಮನೆಯವರು ಆರ್ ಎಫ್ ಒ ಸುರೇಶ್ ಕುಲ್ಲೊಳ್ಲಿ ಹಾಗೂ ಅರಣ್ಯ ಸಿಬ್ಬಂದಿಯನ್ನು ಮನೆಯಲ್ಲಿ ಕೂಡಿ ಹಾಕಿದ್ದಾರೆ.

Home add -Advt

ಶುಕ್ರವಾರ ಗ್ರಾಮದ ಕೆಲವರು ಮೀನು ಹಿಡಿಯಲು ಹೋಗಿದ್ದರು. ಇದನ್ನು ಕಂಡ ಕೆಲವರು ಜಿಂಕೆ ಭೇಟಿಯಾಡಿದ್ದಾಗಿ ಅರಣ್ಯ ಸಿಬ್ಬಂದಿಗೆ ದೂರು ನೀಡಿದ್ದರು. ಅನುಮಾನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದರು ಎಂದು ತಿಳಿದುಬಂದಿದೆ.
2 ಕ್ಷೇತ್ರಗಳಿಂದ ಸಿಎಂ ಬೊಮ್ಮಾಯಿ ಕಣಕ್ಕೆ

Related Articles

Back to top button