Latest

*ಅರಣ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಹೋಗಿ ಬೆಂಕಿಗಾಹುತಿಯಾದ ಫಾರೆಸ್ಟ್ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಲು ಹೋಗಿ ಅರಣ್ಯ ಸಿಬ್ಬಂದಿಯೇ ಬೆಂಕಿಗಾಹುತಿಯಾದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಿಳ್ಹಾರ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯ ವೀಕ್ಷಕ ಯಾಕೂಬ್ (55) ಮೃತರು. ಅರಣ್ಯ ಇಲಾಖೆ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಎಂದು ಗ್ರಾಮಸ್ಥರು ಆರೋಪಿಸಿದ್ದು, ರಸ್ತೆ ಮೇಲೆ ಶವವಿಟ್ಟು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ.

Home add -Advt

ಯಾಕೂಬ್ ದಿನಗೂಲಿ ನೌಕರನಾಗಿ ಅರಣ್ಯ ಇಲಾಖೆಯಲ್ಲಿ ವೀಕ್ಷಕನಾಗಿ ಕೆಲಸ ಮಾಡುತ್ತಿದ್ದ. ಅರಣ್ಯ ಪ್ರದೇಶದಲ್ಲಿ ಬೆಂಕಿ ನಂದಿಸಲು ಹೋಗಿ ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿದ್ದಾರೆ. ಆದರೆ ಗ್ರಾಮಸ್ಥರು ಹಾಗೂ ಕುಟುಂಬದವರು ಹೇಳುವುದೇ ಬೇರೆ. ಅರಣ್ಯ ಇಲಾಖೆ ಅಧಿಕಾರಿಗಳೇ ಬೆಂಕಿ ಹಚ್ಚುವಂತೆ ಹೇಳಿದ್ದು, ಈ ವೇಳೆ ಬೆಂಕಿ ತಗುಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

*ಬೆಳಗಾವಿ: ಪ್ರಜಾಧ್ವನಿ ಬಸ್ ಯಾತ್ರೆಗೆ ಕಾಂಗ್ರೆಸ್ ಸಿದ್ಧತೆ*

https://pragati.taskdun.com/belagaviprajadhwani-bus-yatrejanaury-11th/

Related Articles

Back to top button