Kannada NewsKarnataka NewsLatest

*ಕಳೆ ನಾಶಕ ಸಿಂಪಡಿಸಲು ಹೋಗಿ ಅರಣ್ಯಾಧಿಕಾರಿ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ; ಕುಮಟಾ: ಕಳೆ ನಾಶಕ ಸಿಂಪಡಿಸಲು ಹೋಗಿ ಅರಣ್ಯಾಧಿಕಾರಿಯೊಬ್ಬರು ಪ್ರಾಣಕಳೆದುಕೊಂಡಿರುವ ಧಾರುಣ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಬಾಡ ಗ್ರಾಮದ ನಿವಾಸಿ ಉಪವಲಯ ಅರಣ್ಯಾಧಿಕಾರಿ ಯೋಗೇಶ್ ನಾಯಕ್ ಮೃತರು. ಯೋಗೇಶ್ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Home add -Advt

ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕಳೆ ನಾಶಕ ಸಿಂಪಡಿಸಲು ಹೋಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯೋಗೇಶ್ ನಾಯಕ್ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button