Belagavi NewsBelgaum NewsKannada NewsKarnataka NewsPolitics
		
	
	
*ಅಕ್ಕ ಪಡೆ ರಚನೆ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ತಂಡದಲ್ಲಿ 5 ಮಹಿಳಾ ಎನ್.ಸಿ.ಸಿ. “ಸಿ” ಪ್ರಮಾಣ ಪತ್ರ ಹೊಂದಿದ ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಿಮಾಂಡ ಹೋಮ್ ಆವರಣ, ಶಿವಾಜಿ ನಗರ ಬೆಳಗಾವಿ ಇಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದ್ದು, ಸದರಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 07-11-2025 ರಂದು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಿಮಾಂಡ ಹೋಮ್ ಆವರಣ, ಶಿವಾಜಿ ನಗರ ಬೆಳಗಾವಿ ದೂರವಾಣಿ ಸಂಖ್ಯೆ:0831-2407235 ಕೈಹಾಗೂ ಇ-ಮೇಲ್ ವಿಳಾಸ [email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
 
					 
				 
					 
					 
					 
					
 
					 
					 
					


