ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾದೇಶದಲ್ಲಿ ಇಂದು ರಾತ್ರಿ ವೇಳೆಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮೊಹಮ್ಮದ್ ಯೂನರ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಹೇಳಿದ್ದಾರೆ.
ಮಂಗಳವಾರದಂದು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಬಹುದ್ದೀನ್ ಸಂಸತ್ ನ್ನು ವಿಸರ್ಜನೆ ಮಾಡಿ, ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮೊಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಿದ್ದರು.
ಇದಕ್ಕೂ ಮುನ್ನ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆದಾರಿ ಮಾಡಿಕೊಟ್ಟಿತ್ತು. ಪರಿಣಾಮ ಶೇಖ್ ಹಸೀನ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ