ಪ್ರಗತಿವಾಹಿನಿ ಸುದ್ದಿ, ಮಾಂಜರಿ – ಮಳೆಗಾಲದಲ್ಲಿ ಉಂಟಾಗುತ್ತಿರುವ ಚಿಕ್ಕೋಡಿ ತಾಲೂಕಿನ ದೂಧಗಂಗಾ, ವೇದಗಂಗಾ ಮತ್ತು ಕೃಷ್ಣ ನದಿ ಪ್ರವಾಹ ಕುರಿತು ಬೇಗನೆ ಮಹಾರಾಷ್ಟ್ರ ಸರಕಾರದ ಜಲಸಂಪನ್ಮೂಲ ಸಚಿವರಾದ ಜಯಂತ್ ಪಾಟೀಲ್ ಇವರ ಜೊತೆ ಮಾತನಾಡಿ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ನಡುವೆ ಸಮನ್ವಯ ಸಮಿತಿ ರಚಿಸುವ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಅವರು ಇಂದು ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿಯ ಮೇಲಿರುವ ಹಳೇ ಬ್ರಿಜ್ ಕಮ್ ಬಂಧಾರ ಪರಿಶೀಲಿಸಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ರೈತರ ಅನುಕೂಲಕ್ಕಾಗಿ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಸರ್ವ ಸಾಮಾನ್ಯ ಜನರಿಗೆ ಸಹಕಾರಿಯಾಗಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಮಳೆಗಾಲದಲ್ಲಿ ಉಂಟಾಗುತ್ತಿರುವ ಪ್ರವಾಹ ಕುರಿತು ಬೇಗನೆ ಮಹಾರಾಷ್ಟ್ರ ಸರಕಾರದ ಜಲಸಂಪನ್ಮೂಲ ಸಚಿವರಾದ ಜಯಂತ್ ಪಾಟೀಲ್ ಜೊತೆ ಮಾತನಾಡಿ ಪ್ರವಾಹ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಈ ವೇಳೆ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಡಾಕ್ಟರ್ ಪ್ರಭಾಕರ್ ಕೋರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ -ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಡಾಕ್ಟರ್ ರಾಜೇಂದ್ರ ನೀರಲಿ, ವಿಧಾನಪರಿಷತ್ತಿನ ಸದಸ್ಯರಾದ ಹಾಗೂ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ ಹಾಗೂ ಚಿಕ್ಕೋಡಿ ತಾಲೂಕಿನ ಮಾಂಜರಿ ಚಂದೂರ್ ಕಲ್ಲೋಳ ಯಕ್ಸಂಬಾ ಯಡೂರು ಮುಂತಾದ ಗ್ರಾಮದ ರೈತರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ