Karnataka News

*ಬೆಳ್ಳಂಬೆಳಿಗ್ಗೆ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ವಾಯುವಿಹಾರಕ್ಕೆ ಹೋಗಿದ್ದ ವೇಳೆ ನಗರಸಭೆ ಮಾಜಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಅಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಕಾರವಾರದ ಬಿಎಸ್ ಎನ್ ಎಲ್ ಕಚೇರಿ ಬಳಿ ಇಂದು ಮುಂಜಾನೆ ಬರ್ಬರ ಹತ್ಯೆ ನಡೆದಿದ್ದು, ನಗರಸಭೆ ಮಜಿ ಸದಸ್ಯ ಸತೀಶ್ ಕೊಳಂಕರ್ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಸತೀಶ್ ಕೊಳಂಕರ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ ಫಲಕಾರಿಯಾಗಿಲ್ಲ. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ವೈಯಕ್ತಿಕ ದ್ವೇಷಕ್ಕೆ ಸತೀಶ್ ಕೊಳಂಕರ್ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button