Cancer Hospital 2
Beereshwara 36
LaxmiTai 5

*ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ‌ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ನೂತನ ಸರ್ಕಾರದ ಸಚಿವ ಸಂಪುಟದಲ್ಲಿ  ಮಾಜಿ ಸಿಎಂ ಹೆಚ್​​​.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ನೀಡಲಾಗಿದೆ. 

Emergency Service

ಈ ಕುರಿತು ಟ್ವೀಟ್ ಮಾಡಿರುವ ಹೆಚ್​​​ಡಿಕೆ, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸರ್ಕಾರದ ಸಂಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಈ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಹೆಚ್​​​ಡಿಕೆ ಬರೆದುಕೊಂಡಿದ್ದಾರೆ.

ಇನ್ನೂ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ನಿನ್ನೆಯವರೆಗೆ ಅವರಿಗೆ ಕೃಷಿ ಖಾತೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತಿತ್ತು. ಈ ಬಗ್ಗೆ ಜೆಡಿಎಸ್​​​ ಕಾರ್ಯಕರ್ತರೂ ವಿಶ್ವಾಸ ವ್ಯಕ್ತಪಡಿಸಿದ್ದರು.

Bottom Add3
Bottom Ad 2