Kannada NewsKarnataka NewsNationalPolitics
ಮತ್ತೆ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಎಸ್ಎಂ ಕೃಷ್ಣ

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿದೆ.
ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್ ಆಗಿದ್ದರು.
ಇದೀಗ ಇಂದು ಮತ್ತೆ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.


