
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯರು, ಆರ್‌ಎಸ್‌ಎಸ್ ಮುಖಂಡ ಮತ್ತು ಮಿಥಿಕ್ ಸೊಸೈಟಿ ಅಧ್ಯಕ್ಷರಾಗಿದ್ದ ಕೃ. ನರಹರಿ (92) ನಿಧನರಾಗಿದ್ದಾರೆ.
ಬುಧವಾರ ಬೆಳಗ್ಗೆ 4.30ಕ್ಕೆ ವಯೋ ಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು.
ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.