
ಪ್ರಗತಿವಾಹಿನಿ ಸುದ್ದಿ; ಜೈಪುರ: ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ರಾಜಸ್ಥಾನದ ಸುರ್ ವಾಲ್ ನಲ್ಲಿ ನಡೆದಿದೆ.
ಅಜರುದ್ದೀನ್ ತಮ್ಮ ಕುಟುಂಬದ ಜೊತೆ ಸುರ್ ವಾಲ್ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸುದ್ದು, ಕಾರು ಸಂಪೂರ್ಣ ನುಜ್ಜುಗುಜಾಗಿದೆ. ಅದೃಷ್ಟವಶಾತ್ ಅಜರುದ್ದೀನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಅಪಘಾತದಲ್ಲಿ ಸ್ಥಳೀಯ ಯುವಕನೊಬ್ಬನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ