LatestNationalPolitics

*ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಮಾಜಿ ಡೆಪ್ಯೂಟಿ ಸ್ಪೀಕರ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರ ಮೃತದೇಹ ಇಂದು ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಟಿಎಂಸಿ ಕಚೇರಿ ರಾಂಪುರ್ಹತ್ ನಗರದ ಬ್ಯಾನರ್ಜಿ ಅವರ ನಿವಾಸದ ಸಮೀಪವೇ ಇದೆ. ಪೊಲೀಸರು ಹೆಚ್ಚಿನ ವಿವರಗಳನ್ನ ಬಹಿರಂಗಪಡಿಸಿಲ್ಲ. ಆಶೀಶ್‌ ಅವರ ನಿವಾಸದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ.

ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ಪೊಲೀಸರು ವಿವರಿಸಿದ್ದಾರೆ.

74 ವರ್ಷದ ಆಶಿಶ್ ಬ್ಯಾನರ್ಜಿ ಟಿಎಂಸಿಯ ಹಿರಿಯ ನಾಯಕರಾಗಿದ್ದರು. 2021ರ ಜುಲೈ ನಿಂದ 2026ರ ಮೇ ವರೆಗೆ ಪಶ್ಚಿಮ ಬಂಗಾಳ ವಿಧಾನಸಭೆಯ 13 ನೇ ಉಪಸಭಾಪತಿಯಾಗಿ ಸೇವೆ ಸಲ್ಲಿಸಿದ್ದರು. ಬ್ಯಾನರ್ಜಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಡಿಯಲ್ಲಿ ರಾಜ್ಯದ ಶಿಕ್ಷಣ ಮತ್ತು ಕೃಷಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button