Karnataka NewsPolitics

*ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನಡೆದಿದೆ.

ಈ ಘಟನೆಯಲ್ಲಿ ರಿಕ್ಕಿ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯಿಂದ ಅನತಿ ದೂರದಲ್ಲೇ ಸುಮಾರು 11.30 ರ ವೇಳೆಗೆ ರಿಕ್ಕಿ ರೈ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ರಿಕ್ಕಿ ಅವರನ್ನೇ ಗುರಿಯಾಗಿಸಿಕೊಂಡು ಎರಡು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ.

ರಿಕ್ಕಿ ರೈ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡದಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button