Latest

ಮಾಜಿ ಸಿಎಂ ವೀರಭದ್ರ ಸಿಂಗ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಶೀಮ್ಲಾ: ಹಿಮಾಚಲಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದಬಳಲುತ್ತಿದ್ದ ಅವರನ್ನು ಶಿಮ್ಲಾದ ಇಂದಿರಾಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Home add -Advt

ವೀರಭದ್ರ ಸಿಂಗ್ ಎರಡು ಬಾರಿ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಎರಡನೇ ಬಾರಿ ಗುಣಮುಖರಾಗಿ ಮನೆಗೆ ತೆರಳಿದ್ದ ಅವರಿಗೆ ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೀರಭದ್ರ ಸಿಂಗ್, 5 ಭಾರಿ ಸಂಸದರಾಗಿದ್ದರು. ಅಲ್ಲದೇ 6 ಬಾರಿ ಹಿಮಾಚಲಪ್ರದೇಶ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ವೀರಭದ್ರ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮನೆ ಮುಂದೆ ನಿದ್ರೆಗೆ ಜಾರಿದ್ದವರ ಮೆಲೆ ಹರಿದ ಟಿಪ್ಪರ್; ಮೂರು ಮಕ್ಕಳು ಸೇರಿ ಐವರ ದುರ್ಮರಣ

Related Articles

Back to top button