Film & EntertainmentKannada NewsKarnataka NewsLatest

*ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕನ್ನಡದಲ್ಲಿಯೇ ಐಎಎಸ್ ಬರೆದು ಪಾಸ್ ಆಗಿ ಜನಪ್ರಿಯತೆ ಪಡೆದಿದ್ದ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಹೃದಯಾಘಾತ, ಮೆದುಳು ನಿಷ್ಕ್ರಿಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಮ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧು ಚಂದ್ರಕೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನಟನಾಗಿಯೂ ಗುರುತಿಸಿಕೊಂಡಿದ್ದರು. ವಸಂತಕಾವ್ಯ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ಓ ಪ್ರೇಮ ದೇವತೆ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದರು. 2007ರ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿ ರಾಜಕೀಯ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿದ್ದರು.

ಮೊದಲ ಬಾರಿ ಕನ್ನಡದಲ್ಲಿಯೇ ಐಎಎಸ್ ಬರೆದು ಆಯ್ಕೆಯಾಗಿದ್ದ ಕೆ.ಶಿವರಾಮ್ ಕನ್ನಡ ಪ್ರೇಮ ಮೆಚ್ಚಲೇಬೇಕು. ನಿವೃತ್ತ ಅಧಿಕಾರಿ, ಹಿರಿಯ ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button