Sports

*ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಮಾಜಿ ಕ್ರಿಕೆಟರ್ ಡೆವಿಡ್ ಜಾನ್ಸನ್*

ಪ್ರಗತಿವಾಹಿನಿ ಸುದ್ದಿ: ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಡೆವಿಡ್ ಜಾನ್ಸನ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

52 ವರ್ಷದ ಡೆವಿಡ್ ಜಾನ್ಸನ್, ಬೆಂಗಳೂರಿನ ಕೊತ್ತನೂರು ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

1996ರಲ್ಲಿ ಡೆವಿಡ್ ಜಾನ್ಸನ್ ಭಾರತ ತಂಡದ ಪರ ಟೆಸ್ಟ್ ಪಂದ್ಯ ಆಡಿದ್ದರು. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರ ಆಟವಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಡೆವಿಡ್ ಜಾನ್ಸನ್ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Related Articles

Back to top button