ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಎಂ ಖ್ಯಾತಿಯ ಅಣ್ಣಾಮಲೈ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಖಡಕ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ,‘ಸಿಂಗಂ’ ಎಂದೇ ಖ್ಯಾತಿ ಪಡೆದಿದ್ದರು. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಈಗ ಸ್ವಂತ ಊರಿನಲ್ಲೇ ಇದ್ದು, ಅಲ್ಲೇ ಕೆಲಸ ಮಾಡಿ 2021ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು.
ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪ್ರಕಾರ ಐಪಿಎಸ್ ಎಂದರೆ ದೇಶ, ರಾಷ್ಟ್ರೀಯ ಭದ್ರತೆ. ನಾನು ಅಧಿಕಾರಿಯಾಗಿದ್ದೆ. ಅದೇ ನಿಟ್ಟಿನಲ್ಲಿ ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ನಾನು ರಾಷ್ಟ್ರೀಯ ವಿಚಾರ ಹೊಂದಿರುವ ವ್ಯಕ್ತಿ. ಹೀಗಾಗಿ ನಾನು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನರೇಂದ್ರ ಮೊದಿ ಅವರ ಬಗ್ಗೆ ಇರುವ ಮೆಚ್ಚುಗೆಯೇ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ