
ಪ್ರಗತಿವಾಹಿನಿ ಸುದ್ದಿ: ಹಿರಿಯ ರಾಜಕಾರಣಿ, ಜಮ್ಮು ಮತ್ತು ಕಾಶ್ಮೀರ ಮಾಜಿ ರಾಜ್ಯಪಾಲ ಇತರ ಹಲವಾರು ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದ ಸತ್ಯ ಪಾಲ್ ಮಲಿಕ್ (79) ನಿಧನರಾಗಿದ್ದಾರೆ.
ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಉತ್ತರ ಪ್ರದೇಶದ ಬಾಗ್‌ಪತ್‌ನ ಜಾಟ್ ನಾಯಕರಾಗಿ ಗುರುತಿಸಿಕೊಂಡಿದ್ದರು. ವಿದ್ಯಾರ್ಥಿ ನಾಯಕರಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಅವರು, 1974 ರಲ್ಲಿ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದ ಶಾಸಕರಾಗಿ ಆಯ್ಕೆಯಾಗಿ, ನಂತರ ರಾಜ್ಯಸಭಾ ಸಂಸದರೂ ಸಹ ಆಗಿದ್ದಾರೆ.
ಅಲಿಗಢದಿಂದ ಜನತಾದಳದ ಲೋಕಸಭಾ ಸಂಸದರಾಗಿ ಸೇವೆ ಸಲ್ಲಿಸಿದ ಅವರು ಕೆಲ ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಹಾಗೂ ಲೋಕದಳ ಮತ್ತು ಸಮಾಜವಾದಿ ಪಕ್ಷದಲ್ಲಿ ಇದ್ದರು.