Latest

ಕೊನೆಗೂ ಬಂಧನಕ್ಕೀಡಾದ ಮಾಜಿ ಮೇಯರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೆನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಸಂಪತ್ ರಾಜ್, ತಡರಾತ್ರಿ ಬೆಂಗಳೂರಿನ ತನ್ನ ಸ್ನೇಹಿತನ ಮನೆಗೆ ಬಂದಿದ್ದರು. ಈ ವೇಳೆ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ತನ್ನ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆಯೇ ಸಂಪತ್ ರಾಜ್ ಕೋವಿಡ್ ಪಾಸಿಟಿವ್ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗುಣಮುಖರಾಗುತ್ತಿದ್ದಂತೆಯೇ ಆಸ್ಪತ್ರೆಯಿಂದಲೇ ಎಸ್ಕೇಪ್ ಆಗಿದ್ದರು. ಸಂಪತ್ ರಾಜ್ ಬಂಧನಕ್ಕಾಗಿ ಸಿಸಿಬಿ ವಿಶೇಷ ತಂಡ ರಚನೆ ಮಾಡಿತ್ತು. ಕೊನೆಗೂ ಸಂಪತ್ ರಾಜ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button