ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕರ ಮನೆಗೆ ಬೆಂಕಿ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ನ.19ರವರೆಗೆ ಸಿಸಿಬಿ ಕಸ್ಟಡಿಗೆ ವಹಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ.
ನಿನ್ನೆ ರಾತ್ರಿ ಸಿಸಿಬಿಯಿಂದ ಬಂಧಿಸಲ್ಪಟ್ಟ ಸಂಪತ್ ರಾಜ್ ಅವರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಸಿಸಿಬಿ ಅಧಿಕಾರಿಗಳು ಸಂಪತ್ ರಾಜ್ ಅವರನ್ನು 10 ದಿನಗಳಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಸಿಟಿ ಸಿವಿಲ್ ಕೋರ್ಟ್ 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ