
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು.
ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು .
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 ಮತ್ತು 1994 ಹೀಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು. ನಂತರ ಅಭಯಚಂದ್ರ ಅವರ ಎದುರು ನಿರಂತರ ಪರಾಭವಗೊಂಡು, ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ