*ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ನಿಧನ*: *ಕುಟುಂಬದಲ್ಲಿ ಮಡುಗಟ್ಟಿದ ಶೋಕ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಪತ್ನಿ ಪ್ರಮೀಳಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಮೀಳಾ ಅವರು ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪ್ರಮೀಳಾ ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಆಪ್ತರಲ್ಲಿ ಶೋಕ ಮಡುಗಟ್ಟಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೀಗರಾಗಿರುವ ತಮ್ಮಣ್ಣ ಅವರ ಕುಟುಂಬಕ್ಕೆ ಜೆಡಿಎಸ್ ನಾಯಕರು, ಗಣ್ಯರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ. ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸದಲ್ಲಿ … Continue reading *ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ನಿಧನ*: *ಕುಟುಂಬದಲ್ಲಿ ಮಡುಗಟ್ಟಿದ ಶೋಕ*